

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ವಿವಿಧೆಡೆ ಮನೆಗಳ್ಳತನ, ವಾಹನ ಕಳ್ಳತನ, ದರೋಡೆಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಕಳ್ಳರನ್ನು ಬಂಧಿಸಿ, 33 ಲಕ್ಷ ರೂ ಬೆಲೆಬಾಳುವ ಚಿನ್ನಾಭರಣವನ್ನು ವಶಕ್ಕೆ ಪಡೆಯುವಲ್ಲಿ ಬಾಗೇಪಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2023 ನೇ ಸಾಲಿನಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ತೀಮಾಕಲಪಲ್ಲಿ ಗ್ರಾಮದ ನರಸಿಂಹಮೂರ್ತಿ ಮನೆಯಲ್ಲಿನ ಕಳ್ಳತನ ಪ್ರಕರಣದಲ್ಲಿ ಉಮಾಶಂಕರ್, ಜಗನ್ನಾಥ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಇವರಿಂದ 319 ಗ್ರಾಂ ಚಿನ್ನ, ೨ ಕೆ.ಜಿ ಬೆಳ್ಳಿ, ಕೃತ್ಯಕ್ಕೆ ಬಳಸಿರುವ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಚಿನ್ನಾಭರಣ ಮೌಲ್ಯ ೩೩ ಲಕ್ಷ ರೂ ಇದೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ. ಪ್ರಕರಣಗಳನ್ನು ಪತ್ತೆಹಚ್ಚಿ, ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಾಗೇಪಲ್ಲಿ ಠಾಣೆ ಪೊಲೀಸರಿಗ ಪ್ರಶಂಸೆ ಪತ್ರಗಳನ್ನು ವಿತರಿಸಿ ಅಭಿನಂಧಿಸಿದ್ದಾರೆ.
ಪೊಲೀಸ್ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ನಡೆದಿರುವ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ ಪೆ ಕ್ಟರ್‌ಗಳಾದ ಸುನೀಲ್ ಕುಮಾರ್, ಮನಿರತ್ನಂ, ಪೇದೆಗಳಾದ ಶ್ರೀನಾಥ, ಶ್ರೀಪತಿ, ಮೋಹನ್, ಖಧೀರ್, ವೆಂಕಟ್, ನಾಗೇಶ್, ಕೃಷ್ಣ, ವೆಂಕಟಶಿವಾ, ಸುರೇಶ್, ಸಾಗರ್, ಧನಂಜಯ ಭಾಗವಹಿಸಿದ್ದರು.