ವೈದ್ಯರ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲಿ

11 ckm 10
Published on

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಮಹಿಳೆಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದಿಂದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಮಾತನಾಡಿ, ಅರಳಗುಪ್ಪೆ ಮಲ್ಲೇಗೌಡ ಆಸ್ಪತ್ರೆಯಲ್ಲಿ ಡಾ.ವೆಂಕಟೇಶ್ ಕರ್ತವ್ಯ ನಿರತರಾಗಿದ್ದ ವೇಳೆ ಮಹಿಳೆಯೊಬ್ಬರು ಏಕಾಏಕಿ ಚಪ್ಪಲಿ ಎಸೆದು, ಹಲ್ಲೆ ಮುಂದಾಗಿರುವುದು ಖಂಡನೀಯ. ಆಕೆ ವಿರುದ್ಧ ಕಠಿಣ ಕ್ರಮಕೈಗೊಳ್ಳದಿದ್ದಲ್ಲಿ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‌ಗಳ ಮೇಲೆ ಈ ರೀತಿಯ ಹಲ್ಲೆಗಳು ನಡೆಯುತ್ತಿರುತ್ತವೆ. ಆದರೆ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದಿರುವುದರಿಂದ ಹಲ್ಲೆ ಪ್ರಕರಣಗಳು ಮರುಕಳಿಸುತ್ತಿದೆ. ಒಮ್ಮೆ ಇದಕ್ಕೆ ಕಠಿವಾಣ ಹಾಕಿದರೆ ಮಾತ್ರ ಯಾವುದೇ ವ್ಯಕ್ತಿ ಈ ಮಟ್ಟಕ್ಕೆ ಇಳಿಯುವುದಿಲ್ಲ ಎಂದರು.
ತುರ್ತು ನಿಗಾಘಟಕದಲ್ಲಿ ವೈದ್ಯ ಕರ್ತವ್ಯದಲ್ಲಿದ್ದಾಗ ತಮ್ಮ ಕಡೆ ರೋಗಿಯನ್ನು ಶೀಘ್ರ ನೋಡಲು ಬಿಡಲಿಲ್ಲ ಂಬ ಕಾರಣಕ್ಕೆ ಹಲ್ಲೆಗೆ ಮುಂದಾಗಿರುವುದು ನ್ಯಾಯಸಮ್ಮತವಲ್ಲ. ಜಿಲ್ಲಾಸ್ಪತ್ರೆಯಲ್ಲಿ ಪ್ರತಿದಿನ ಸಾವಿರಾರು ರೋಗಿಗಳನ್ನು ಚಿಕಿತ್ಸೆಗೆ ಬರುತ್ತಾರೆ. ತ್ವರಿತಗತಿಯಲ್ಲಿ ಚಿಕಿತ್ಸೆಗೆ ಪಟ್ಟುಹಿಡಿದು ವೈದ್ಯರಿಗೆ ಅಗೌರವ ತೋರಿರುವುದು ಸರಿಯಲ್ಲ ಎಂದು ಹೇಳಿದರು.
ಕರೊನಾ ವೇಳೆಯಲ್ಲಿ ಪ್ರಾಣದ ಹಂಗು ತೊರೆದು ರೋಗಿಗಳ ಪ್ರಾಣ ರಕ್ಷಣೆ ಮಾಡಿದ ವೈದ್ಯರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ವೈದ್ಯರ ಮೇಲೆ ಏಕಾಏಕಿ ದಾಳಿ ನಡೆಸಿರುವುದು ಅಮಾನವೀಯ. ಸರ್ಕಾರಿ ವೈದ್ಯರ ಪ್ರಾಣ ಹಾಗೂ ಮಾನಹಾನಿಗೆ ಮುಂದಾಗಿರುವ ಮಹಿಳೆ ಹಾಗೂ ಆತನ ಸಹಚರರಿಗೆ ಬೇಲ್ ಸಿಗದ ರೀತಿಯಲ್ಲಿ ಪೊಲೀಸರು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಕಾರ್ಯದರ್ಶಿ ಸೀತಾರಾಮಭರಣ್ಯ, ಜಿಲ್ಲಾ ಉಪಾಧ್ಯಕ್ಷ ಕನಕರಾಜ್, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಜಯಣ್ಣ, ಮುಖಂಡರಾದ ಕೆ.ಆರ್.ಅನಿಲ್‌ಕುಮಾರ್, ಕವೀಶ್, ರೇವನಾಥ್, ನವೀನ್, ಜಗದೀಶ್, ಮಂಜುನಾಥ್, ಧರ್ಮರಾಜು, ರಾಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net