ಶವಸಂಸ್ಕಾರಕ್ಕೆ ಬಂದವರು ಮಸಣಕ್ಕೆ

13ANG1- crime
Published on

ಅಣ್ಣಿಗೇರಿ: ಅಂತ್ಯ ಸಂಸ್ಕಾರ ಮುಗಿಸಿ ಬೈಕ್ ಮೇಲೆ ಮನೆಗೆ ವಾಪಸಾಗುತ್ತಿದ್ದ ಸವಾರನಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಿಂಗ್ ರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಗದಗ ಜಿಲ್ಲೆ ಅಡವಿಸೋಮಾಪುರದ ಗೂಳಪ್ಪ ಉಮ್ಮಣ್ಣವರ (40) ಮೃತಪಟ್ಟ ಬೈಕ್ ಸವಾರ. ಗೂಳಪ್ಪ ಅವರು ಪತ್ನಿ ಭೀಮವ್ವ ಹಾಗೂ ತಾಯಿ ಪಾರವ್ವ ಅವರನ್ನು ಬೈಕ್ ಮೇಲೆ ಕರೆದುಕೊಂಡು ಹುಬ್ಬಳ್ಳಿ ತಾಲೂಕಿನ ರೊಟ್ಟಿಗವಾಡ ಗ್ರಾಮಕ್ಕೆ ಅಂತ್ಯ ಸಂಸ್ಕಾರಕ್ಕೆಂದು ಬಂದಿದ್ದರು.

ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಅಡವಿಸೋಮಾಪುರಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಇದರಿಂದ ಗೂಳಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್ ಚಾಲಕನನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೆಚ್ಚುವರಿ ಪಿಎಸ್​ಐ ಯು.ಸಿ. ಪಾಟೀಲ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net