ಕ್ರೀಡಾ ಕ್ಷೇತ್ರ ಆಯ್ಕೆ ಮಾಡಿಕೊಂಡವರಿಗಿದೆ ಉತ್ತಮ ಭವಿಷ್ಯ

4spt2
ಸೋಮವಾರಪೇಟೆ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟವನ್ನು ಕುವೆಂಪು ವಿದ್ಯಾಸಂಸ್ಥೆ ನಿರ್ದೇಶಕ ನಂದಕುಮಾರ್ ಉದ್ಘಾಟಿಸಿದರು. ಅಶೋಕ್, ಸುರೇಶ್ ಇದ್ದರು.
Published on

ಸೋಮವಾರಪೇಟೆ: ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದೆ. ಗ್ರಾಮೀಣ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಬಡ್ಡಿ ಆಡುತ್ತಿದ್ದಾರೆ. ಕ್ರೀಡಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡವರಿಗೂ ಉತ್ತಮ ಭವಿಷ್ಯವಿದೆ ಎಂದು ಕುವೆಂಪು ವಿದ್ಯಾಸಂಸ್ಥೆ ನಿರ್ದೇಶಕ ನಂದಕುಮಾರ್ ಹೇಳಿದರು.

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜು ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಬೆಳವಣಿಗೆ ಆಗುತ್ತದೆ. ವಿದ್ಯಾರ್ಥಿಗಳು ಆರೋಗ್ಯವನ್ನು ಕಾಪಾಡಿಕೊಂಡರೆ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ. ಕ್ರೀಡಾಪಟುಗಳು ಶಿಸ್ತು ಮತ್ತು ಗುರಿ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.

ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲ ಮಿಲ್ಡ್ರೆಡ್ ಗೋನ್ಸ್ ಲ್ವೆಸ್, ಶನಿವಾರಸಂತೆ ಕನ್ನಡ ಭಾರತಿ ಕಾಲೇಜಿನ ಪ್ರಾಂಶುಪಾಲ ಅಶೋಕ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ. ಬಿ. ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net