ಆಗ ಹೋರಾಡಿದ್ದವರು ಈಗ ಡೀಸೆಲ್ ದರ ಏರಿಸಿದ್ದಾರೆ

PETROL
Published on

ಮೈಸೂರು: ಬಿಜೆಪಿ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದಾಗ ಸಿದ್ದರಾಮಯ್ಯ ಹೋರಾಟ ಮಾಡಿದ್ದರು. ಇದೀಗ ಅವರೇ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಕಿಡಿ ಕಾರಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಕಡಿತ ಮಾಡಲಾಗಿತ್ತು. ಇದೀಗ ಬೆಲೆ ಹೆಚ್ಚಳ ಮಾಡಿರುವ ಸರ್ಕಾರ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದರು.

ಪೆಟ್ರೋಲ್, ಡೀಸೆಲ್ ದರ ಏರಿಕೆ ಆದರೆ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದತ್ತ ಕೈ ತೋರಿಸುತ್ತಿದ್ದರು. ಆದರೆ ಈಗ ಪಂಚ ಗ್ಯಾರಂಟಿಗಳ ಕಾರಣ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಒಂದು ಕೈಯಲ್ಲಿ ಗ್ಯಾರಂಟಿ ನೀಡಿ, ಮತ್ತೊಂದು ಕೈಯಲ್ಲಿ ಜನರಿಂದ ಹಣ ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net