

ಮಡಿಕೇರಿ: ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸಿಲ್ಲ. ಆರಂಭದ ಹಂತದಲ್ಲಿ ಶಾಸಕರುಗಳಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೂ ಸೂಕ್ತ ಸ್ಥಾನ ಸಿಗಲಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಬಜೆಗುಂಡಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ ಸರ್ವ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಸ್ಥಾನಮಾನ ನೀಡಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ, ಯಾರೂ ಊಹಾಪೋಹಗಳಿಗೆ ಕಿವಿಗೊಡಬಾರದು. ಸಧ್ಯದಲ್ಲೇ ಲೋಕಸಭಾ ಚುನಾವಣೆ ಬರಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಮೈಸೂರು- ಕೊಡಗು ಕ್ಷೇತ್ರವನ್ನು ಗೆಲ್ಲುವ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ.
ನಿಗಮ ಮಂಡಳಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳ ನೇಮಕವಾಗಿಲ್ಲ. ಸುಮಾರು ೭೦ ಸ್ಥಾನಗಳಿಗೆ ಮಾತ್ರ ಆಯ್ಕೆಯಾಗಿದ್ದು, ಇನ್ನೂ ೪೦ ಸ್ಥಾನಗಳಿಗೆ ನೇಮಕವಾಗಬೇಕಾಗಿದೆ. ಮುಂದೆ ನಡೆಯುವ ಆಯ್ಕೆ ಪ್ರಕ್ರಿಯೆ ಸಂದರ್ಭ ಕೊಡಗಿಗೆ ಪ್ರಾತಿನಿಧ್ಯ ದೊರೆಯಲಿದೆ. ಅದರಲ್ಲೂ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಸಿಗುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಡಗು- ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸಿದರೂ ಈ ಬಾರಿ ಗೆಲುವು ನಿಶ್ಚಿತವಾಗಿದೆ. ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಹಿತ ಕಾಯಲು ಕಟಿಬದ್ಧರಾಗಿದ್ದಾರೆ. ಸ್ಥಾನಮಾನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಶಾಸಕದ್ವಯರು ಕಾರ್ಯಕರ್ತರ ಹಿತ ಕಾಯುತ್ತಿದ್ದಾರೆ ಎಂದು ಯಾಕುಬ್ ಸ್ಪಷ್ಟಪಡಿಸಿದ್ದಾರೆ.