ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧಿಸುವವರು ದೇಶದ್ರೋಹಿಗಳು

pramod-mutalik-320
Published on

ಹುಬ್ಬಳ್ಳಿ: ಚನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರುದ್ದೇಶ ಏನೆಂಬುದು ಎಲ್ಲರಿಗೂ ಗೊತ್ತಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥವರು ದೇಶ ವಿಭಜಿಸುವವರು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದು ಸಮಾಜಕ್ಕಿದೆ. ನಿಮ್ಮ ನಮಾಜ್​ಗೂ ಅಡ್ಡಿ ಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ಮುಂದೆ ರಾಣಿ ಚನ್ನಮ್ಮ ಮೈದಾನದಲ್ಲಿ ನಮಾಜ್​ಗೆ ಅವಕಾಶ ಕೊಡದಂತೆ ಕೋರ್ಟ್​ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ. ವಿರೋಧಿಗಳ ಸೊಕ್ಕು ಅಡಗಿಸುವ ತಾಕತ್ತು ನಮಗಿದೆ ಎಂದು ಕಿಡಿಯಾದರು.

ಪ್ರಮೋದ ಮುತಾಲಿಕ್ ವಿರುದ್ಧ ಕೇಸ್:

ನಗರದ ಚನ್ನಮ್ಮ ಮೈದಾನದಲ್ಲಿ ಆಡಿದ್ದ ಮಾತುಗಳನ್ನಾಧರಿಸಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿರುದ್ಧ ಉಪನಗರ ಠಾಣೆಯಲ್ಲಿ ಐಪಿಸಿ 153 (ಎ), 295(ಎ) ಪ್ರಕರಣ ದಾಖಲಾಗಿವೆ.

‘ಇತರ ಧರ್ಮದ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಹು-ಧಾ ಮಹಾನಗರ ಪಾಲಿಕೆ ವಲಯ ಕಚೇರಿ 8ರ ಸಹಾಯಕ ಆಯುಕ್ತ ಚಂದ್ರಶೇಖರಗೌಡ ಎಂಬುವರು ದೂರು ಕೊಟ್ಟಿದ್ದಾರೆ. ಈ ದೂರು ಆಧರಿಸಿ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net