

ಹೆಬ್ರಿ: ಕುವೆಂಪು ಮಹಾನ್ ಮಾನವತಾವಾದಿಯಾಗಿದ್ದರು. ಜಾತಿ, ವರ್ಗ, ಧರ್ಮ ರಹಿತ ಚಿಂತನೆ ಬೆಳೆಸಿಕೊಳ್ಳಲು ಯುವಜನತೆಗೆ ಕರೆ ನೀಡಿದವರು ಎಂದು ಕೊಪ್ಪ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಜಿ.ಎನ್.ಧನಂಜಯ ಮೂರ್ತಿ ಹೇಳಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ‘ಚಕೋರ’ ಸಾಹಿತ್ಯ ವೇದಿಕೆ, ಉಡುಪಿ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಯಲ್ಲಿ ಶುಕ್ರವಾರ ಕುವೆಂಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಮಾತನಾಡಿದರು. ಪ್ರಾಂಶುಪಾಲ ಡಾ.ವಿದ್ಯಾಧರ ಹೆಗ್ಡೆ ಎಸ್.ಉಡುಪಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಡಾ.ಪ್ರವೀಣ್ ಕುಮಾರ್ ಎಸ್. ಸ್ವಾಗತಿಸಿ, ‘ಚಕೋರ’ ಉಡುಪಿ ಜಿಲ್ಲಾ ಸಂಚಾಲಕಿ ಶಾಲಿನಿ ಯು.ಬಿ. ನಿರೂಪಿಸಿದರು. ತಿಮ್ಮಪ್ಪ ಗುಲ್ವಾಡಿ ವಂದಿಸಿದರು.