

ಶಿಗ್ಗಾಂವಿ: ಮನೆ ಹಿಂದಿನ ಕೊಟ್ಟಿಗೆಯಲ್ಲಿ ಕಟ್ಟಿದ್ದ 60 ಸಾವಿರ ರೂ. ಮೌಲ್ಯದ 3 ಟಗರುಗಳನ್ನು ಯಾರೋ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸುರೇಶ ಮಲೆಪ್ಪ ಹರಿಜನ (55) ಎಂಬುವರ ಟಗರು ಕಳ್ಳತನ ಮಾಡಿರುವುದು.
ಇವರು ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಟಗರುಗಳನ್ನು ಯಾರೋ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.