ಗಲ್ಫ್ ರಾಷ್ಟ್ರಗಳಿಂದ ಸಂಸದೆ ಶೋಭಾಗೆ ಬೆದರಿಕೆ ಕರೆ

shobha
Published on

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಕೇರಳದ ಹಿಂದು ಯುವಕನಿಗೆ ಕುವೈತ್‌ನಲ್ಲಿ ಕಪಾಳಮೋಕ್ಷ ಮಾಡಿದ ದುಷ್ಕರ್ಮಿಗಳ ವಿರುದ್ಧ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಗಲ್ಫ್ ರಾಷ್ಟ್ರಗಳಿಂದ ನಿರಂತರ ಬೆದರಿಕೆ ಕರೆ ಬರುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ಸುಮ್ಮನೆ ಕೂತಿಲ್ಲ. ವಿಶ್ರಾಂತಿ ಇಲ್ಲದೆ ನಿತ್ಯವೂ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸುತ್ತಿದ್ದೇನೆ. ದವಸ ಧಾನ್ಯಗಳ ವ್ಯವಸ್ಥೆ ಮಾಡುತ್ತಿದ್ದೇನೆ. ವ್ಯಕ್ತಿಯೋರ್ವರು ಕರೆ ಮಾಡಿ ಉಡುಪಿ ಲಾಕ್‌ಡೌನ್ ಸಡಿಲಿಕೆ ಸಮಯದ ಬಗ್ಗೆ ಕೇಳಿದಾಗ ‘ಅದು ನನಗೆ ಗೊತ್ತಿಲ್ಲ’ ಎಂದು ಉತ್ತರಿಸಿದ್ದ ಕಾಲ್ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರ ಕರೆಯ ಉದ್ದೇಶವೇನು? ಅದರ ಹಿನ್ನೆಲೆ ಏನು ಎಂದು ಗೊತ್ತಿಲ್ಲ. ಮತದಾರರಿಗೆ ಅಗೌರವ ತೋರುವ ಕೆಲಸ ಮಾಡಿಲ್ಲ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಮೂರು ವರ್ಷಗಳಿಂದ ಜಿಹಾದಿಗಳಿಂದ ಬೆದರಿಕೆ ಹಾಗೂ ಅಶ್ಲೀಲ ಕರೆಗಳು ಬರುತ್ತಿವೆ. ಇಂಟರ್ನೆಟ್ ಕರೆ ಆಗಿರುವುದರಿಂದ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net