ಬೆದರಿಕೆ ಕರೆ ಮಾಡಿದ್ದ ಆರೋಪಿ ಅಂದರ್!

Crime Logo
Published on

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಪತ್ತೆ ಹಚ್ಚುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಕ್ಕೇರಿಯ ಕಿರಣ ಮೋಷಿ (48) ಬೆದರಿಕೆ ಕರೆ ಮಾಡಿದ್ದ ಆರೋಪಿ. ತನ್ನ ಪತ್ನಿಯ ಹೆಸರಿನಲ್ಲಿರುವ ಸಿಮ್ ಕಾರ್ಡ್‌ನಿಂದ ಬಂದಿಖಾನೆ ಇಲಾಖೆಯ ಉತ್ತರ ವಲಯದ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅ.8ರಂದು ಮಧ್ಯಾಹ್ನ ಕರೆ ಮಾಡಿ ಬೆದರಿಕೆ ಹಾಕಿದ್ದ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಆರೋಪಿ ಕಿರಣ ಮೋಷಿ ಈ ಹಿಂದೆ 2022 ರಲ್ಲಿ ಬೇರೆಯವರ ಅಕೌಂಟ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಆ ವೇಳೆ ಸೈಬರ್ ಕ್ರೈಮ್ ಆರೋಪದಡಿ 10 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net