ಎಂಡಿಎಂಎ ಮಾರಾಟ ಮೂವರು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕುಲಶೇಖರ ಸಿಲ್ವರ್ ಗೇಟ್ ನಿವಾಸಿ ಜನನ್ ಜಗನ್ನಾಥ್ (29), ಬೋಳಾರ ನಿವಾಸಿ ಪರೀಕ್ಷಿತ್ (33) ಹಾಗೂ ರಥಬೀದಿ ನಿವಾಸಿ ಸುಶಾನ್ ಪೂಜಾರಿ (27) ಬಂಧಿತ ಆರೋಪಿಗಳು.
ಗೂಡ್‌ಶೆಡ್ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದಾರೆ. ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜನನ್ ಜಗನ್ನಾಥ್ ಮತ್ತು ಪರೀಕ್ಷಿತ್ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, 1,110 ರೂ. ನಗದು, 3 ಮೊಬೈಲ್, 1 ತೂಕ ಮಾಪನ ವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೂಲಂಕುಷವಾಗಿ ತನಿಖೆ ಮಾಡಲು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪಾಂಡೇಶ್ವರ ಠಾಣೆ ಪೊಲೀಸರು ಜೂ.6ರಂದು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಬಂಧಿಸಲಾಗಿತ್ತು. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೋರ್ವ ಆರೋಪಿ ಸುಶಾನ್ ಪೂಜಾರಿ ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net