ಕೊಲೆ ಆರೋಪಿಯನ್ನು ಹಾಡಹಗಲೇ ಕೊಚ್ಚಿ ಕೊಂದ ಪ್ರಕರಣ; ಮೂವರು ಆರೋಪಿಗಳ ಬಂಧನ..

arrest
Published on

ಮಂಗಳೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್​ ಮೇರ್ಲ ಕೊಲೆ ಆರೋಪಿ ಚರಣ್ ಎಂಬಾತನನ್ನು ಹಾಡಹಗಲೇ ಕೊಚ್ಚಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನರ್ಮೆಶ್ ರೈ, ನಿತಿಲ್ ಶೆಟ್ಟಿ, ವಿಜೇಶ್ ಬಂಧಿತ ಆರೋಪಿಗಳು. ಇವರನ್ನು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಲ್ಲತ್ತಡ್ಕ ಎಂಬಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ನಿನ್ನೆ ಈ ಕೊಲೆ ನಡೆದಿತ್ತು.

2019ರ ಸೆ. 4ರಂದು ನಡೆದಿದ್ದ ಕಾರ್ತಿಕ್ ಮೇರ್ಲ ಕೊಲೆಗೆ ಸಂಬಂಧಿಸಿದಂತೆ ಪ್ರತೀಕಾರವಾಗಿ ಪ್ರಮುಖ ಆರೋಪಿಯಾಗಿದ್ದ ಚರಣ್​ ಎಂಬಾತನನ್ನು ನಿನ್ನೆ ಎರಡು ಬೈಕ್​ಗಳಲ್ಲಿ ಬಂದಿದ್ದ ಮೂವರು ಆರೋಪಿಗಳು ಕೊಚ್ಚಿ ಕೊಂದು ಪರಾರಿಯಾಗಿದ್ದರು. ಈ ಕುರಿತು ಬೆಳ್ಳಾರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಂದು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net