ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರ ಬಂಧನ

Crime Logo
Published on

ಮೈಸೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿರುವ ಸೆನ್ ಠಾಣೆ ಪೊಲೀಸರು 6.3 ಲಕ್ಷ ರೂ. ಮೌಲ್ಯದ 21 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪಾಂಡವಪುರದ ಅರುಣ್‌ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಬಂಧಿತರು.

ಇತ್ತೀಚೆಗೆ ಮೈಸೂರು-ಬೆಂಗಳೂರು ಹೆದ್ದಾರಿಯ ರಿಂಗ್ ರಸ್ತೆಯ ಬಳಿ ಕಾರಿನಲ್ಲಿ ಎರಡು ಬ್ಯಾಗ್ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳು ಒರಿಸ್ಸಾದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಹೇಳಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net