ಪ್ರತ್ಯೇಕ ಗಾಂಜಾ ಪ್ರಕರಣ, ಮೂವರ ಬಂಧನ

ganja case areest
Published on

ಶಿವಮೊಗ್ಗ: ನಗರದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಗಾಂಜಾ ವ್ಯಸನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ರಾಕೇಶ್ ಮತ್ತು ಮೊಹಮದ್ ಹುಸೈನ್ ಬಂಧಿತರು.

ಖಾಸಗಿ ಬಸ್ ನಿಲ್ದಾಣದಲ್ಲಿ ಪೊಲೀಸರು ಅನುಮಾನದ ಮೇರೆಗೆ ದರ್ಶನ್ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ದರ್ಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಪುರಲೆಯ ಅಪೂರ್ವ ಲೇಔಟ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ರಾಕೇಶ್ ಮತ್ತು ಮೊಹಮದ್ ಹುಸೈನ್ ಎಂಬಾತನನ್ನು ವಶಕ್ಕೆ ಪಡೆದು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಹಾಗಾಗಿ ಇಬ್ಬರನ್ನು ಬಂಧಿಸಿರುವ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net