

ಮಂಡ್ಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ಪರಿಣಾಮಕಾರಿ ಅನುಷ್ಠಾನ ಜಿಲ್ಲೆಗೆ 3 ವಿಭಾಗದಲ್ಲಿ ರಾಜ್ಯಪ್ರಶಸ್ತಿ ದೊರೆತಿದೆ.
ಮೈಸೂರು ವಿಭಾಗದ ಅತ್ಯುತ್ತಮ ಒಗ್ಗೂಡಿಸುವಿಕೆ ಜಿಲ್ಲಾ ಪುರಸ್ಕಾರಕ್ಕೆ ರೇಷ್ಮೆ ಇಲಾಖೆ, ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರಕ್ಕೆ ಮದ್ದೂರು ತಾಲೂಕು ಕೆ.ಶೆಟ್ಟಹಳ್ಳಿ ಹಾಗೂ ಮದ್ದೂರು ತಾಲೂಕು ದೊಡ್ಡರಸಿನಕೆರೆ ಗ್ರಾಮ ಪಂಚಾಯಿತಿ ಡಿ.ಕೆ.ಲತಾ ಅತ್ಯುತ್ತಮ ಕಾಯಕ ಬಂಧುವಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ನರೇಗಾ ಹಬ್ಬದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜು ಹೊರಟ್ಟಿ ಇದ್ದರು. ಜಿಲ್ಲಾ ರೇಷ್ಮೆ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಕೆ.ಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷೆ ಮೈನಾವತಿ ಮತ್ತು ಪಿಡಿಒ ನಂಜುಂಡಯ್ಯ, ಪಿ.ದೊಡ್ಡರಸಿನಕೆರೆ ಗ್ರಾ.ಪಂ ಕಾಯಕ ಬಂಧು ಲತಾ ಪ್ರಶಸ್ತಿ ಸ್ವೀಕರಿಸಿದರು.