ವಾಕಿಂಗ್ ಮಾಡೋ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಮೂವರು ಕುಖ್ಯಾತ ಸರಗಳ್ಳರ ಬಂಧನ

pic theif
Published on

ಬೆಂಗಳೂರು: ವಾಕಿಂಗ್ ಮಾಡೋ ಮಹಿಳೆಯರನ್ನ ಟಾರ್ಗೆಟ್ ಮಾಡಿ, ಬೈಕ್​ನಲ್ಲಿ ಬಂದು ಕ್ಷಣಾರ್ಧದಲ್ಲಿ ಸರಗಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ಪರಮೇಶ್ವರಯ್ಯ, ಜಗದೀಶ್, ಶಶಿಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 17 ಲಕ್ಷ ರೂ. ಬೆಲೆಬಾಳುವ 347 ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯವಾಗಿದೆ.

ಆರೋಪಿಗಳ ಬಂಧನದಿಂದ ಅನ್ನಪೂರ್ಣೇಶ್ವರಿ ನಗರ, ಬಸವೇಶ್ವರ ನಗರ, ಆರ್.ಆರ್. ನಗರ, ಹೊಸಕೋಟೆ, ಮಾದನಾಯಕನಹಳ್ಳಿ, ನಾಗಮಂಗಲ ಪೊಲೀಸ್ ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ಪತ್ತೆ ಮಾಡಲಾಗಿದೆ. ಈ ಸಂಬಂಧ ಆರೋಪಿಗಳ ವಿರುದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net