ಮೂವರು ಕ್ರಿಕೆಟ್ ಬುಕ್ಕಿಗಳ ಬಂಧನ

crime
Published on

ಹುಬ್ಬಳ್ಳಿ: ಇಲ್ಲಿನ ತೊರವಿಹಕ್ಕಲ ಹತ್ತಿರ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಸಿಸಿಬಿ ವಿಭಾಗದ ಪೊಲೀಸರು, ಮೂವರು ಕ್ರಿಕೆಟ್ ಬುಕ್ಕಿಗಳನ್ನು ಬಂಧಿಸಿದ್ದಾರೆ. ಅವರಿಂದ 61 ಸಾವಿರ ರೂ. ನಗದು, 15 ಸಾವಿರ ರೂ. ಮೌಲ್ಯದ ವಿವಿಧ ಕಂಪನಿಯ 3 ಮೊಬೈಲ್​ಫೋನ್ ಸೇರಿ ಒಟ್ಟು 76 ಸಾವಿರ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಿದ್ದಾರೆ.

ದಕ್ಷಿಣ ಆಫ್ರಿಕ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿತ್ತು. ಸಿಸಿಬಿ ವಿಭಾಗದ ಪೊಲೀಸ್ ಇನ್​ಸ್ಪೆಕ್ಟರ್ ಪ್ರಭು ಗಂಗೇನಹಳ್ಳಿ ನೇತೃತ್ವದ ತಂಡ ದಾಳಿ ಮಾಡಿ ಮೂವರನ್ನು ಬಂಧಿಸಿದೆ. ಕಮರಿಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net