ರಾಜ್ಯದಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್

Rain
Published on

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಮಳೆ ಮುಂದಿನ 3 ದಿನ ಮುಂದುವರಿಯಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 72 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ತೀರದುದ್ದಕ್ಕೂ ಗಾಳಿ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.21ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿನಲ್ಲಿ ಸೆ. 22ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net