

ಬೆಂಗಳೂರು: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 72 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮುಂದಿನ 48 ಗಂಟೆ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿ ಸಲಾಗಿದೆ. ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿನಲ್ಲಿ ಸೆ. 21ರಂದು ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.