ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಸಾವು; ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

yash fans
Published on

-ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ 

ಗದಗ: ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್  ತಿಳಿಸಿದರು.

ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಮೃತಪಟ್ಟ ಅಭಿಮಾನಿಗಳ ಮನೆಗೆ ಇಂದು (ಜ.08) ಸಂಜೆ 4 ಗಂಟೆಗೆ ನಟ ಯಶ್​ ಭೇಟಿ ನೀಡಲಿದ್ದಾರೆ ಎಂದು ಯಶ್​ ಆಪ್ತ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net