ಬಸ್ ಮಗುಚಿ ಮೂವರಿಗೆ ಗಾಯ

13 HANUR 3
Published on

  • ಚಾಮರಾಜನಗರ : ಕೊಳ್ಳೇಗಾಲದಿಂದ ಬೈಲೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಬುಧವಾರ ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

  • ಕೊಳ್ಳೇಗಾಲದಿಂದ ಬೈಲೂರಿನ ಕಡೆಗೆ ತೆರಳುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

  • ಚಾಲಕ ಬಸ್ಸನ್ನು ನಿರ್ವಾಹಕನಿಗೆ ನೀಡಿದ್ದು, ಆತ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ತನಿಖೆ ನಡೆಸಿ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತು ಪಡಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net