

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಚನ್ನಪೇಟೆಯಲ್ಲಿ ಬುಧವಾರ ಬೆಳಗ್ಗೆ ಅಡುಗೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು, ಮಹಿಳೆ ಸೇರಿದಂತೆ ಮೂವರು ಸುಟ್ಟು ಗಾಯಗೊಂಡಿದ್ದಾರೆ.
ಸರಸ್ವತಿ ಬಸವಾ, ಗುರುನಾಥ ಬಸವಾ (40) ಹಾಗೂ ವಿರಾಜ್ ಬಸವಾ (10) ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕಸಬಾಪೇಟೆ ಠಾಣೆ ಇನ್‌ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಮತ್ತು ಸಿಬ್ಬಂದಿ ತೆರಳಿ ಗಾಯಾಳುಗಳನ್ನು ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.