ಖಾಸಗಿ ಬಸ್​ ಪಲ್ಟಿ; ಮೂವರು ಸಾವು, 38ಕ್ಕೂ ಹೆಚ್ಚು ಜನರು ಗಂಭೀರ

Bus Accident
Published on

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್​ ಕಣಿವೆಗೆ ಉರುಳಿದ ಪರಿಣಾಮ ಮೂವರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ಗೋಕರ್ಣದತ್ತ ಶಿವಮೊಗ್ಗ ಮಾರ್ಗವಾಗಿ ಬಸ್​ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 38 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net