ಬೈಕ್​ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್​; ಮೂವರು ಸವಾರರು ಸಾವು

Ambualance Accident
Published on

ಶಿವಮೊಗ್ಗ: ಅಂಬುಲೆನ್ಸ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತರಲಘಟ್ಟದ ಬಳಿ ನಡೆದಿದೆ.

ಮೃತರು ಹೊಸಜೋಗ ಗ್ರಾಮದ ನಿವಾಸಿಗಳಾದ ಕಾರ್ತಿಕ್ (27), ಅಜಯ್(25) ಎಂದು ಗುರುತಿಸಲಾಗಿದ್ದು, ಅಂಬುಲೆನ್ಸ್​ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್​ ಸವಾರರು ಶಿಕಾರಿಪುರದಿಂದ ತಮ್ಮ ಊರಿಗೆ ವಾಪಸ್​ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್​ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಸ ಜೋಗದ ಮೂವರು ಸವಾರರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net