ಲಾರಿ-ಸ್ಕೂಟರ್ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬರ ಮೂವರು ಸಾವು

tumkur Accident
Published on

ತುಮಕೂರು: ಬೈಕ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಅರಸಾಪುರ ಗೇಟ್​ ಬಳಿ ನಡೆದಿದೆ.

ಘಟನೆಯಲ್ಲಿ ಅನಿತಾ (40), ಪವನ್ (20), ಬಾಲಾಜಿ (18) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ ತಾಂಡದ ನಿವಾಸಿಗಳು ಎನ್ನಲಾಗಿದೆ.

ಮಧುಗಿರಿಯಿಂದ ಗೌರಿಬಿದನೂರು ಕಡೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕೊರಟಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Bike Accident
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net