ಪ್ರತ್ಯೇಕ ಪ್ರಕರಣ: ರೈಲು ಡಿಕ್ಕಿ ಹೊಡೆದು ಮೂವರು ಸಾವು

Crime Logo
Published on

ಮಂಡ್ಯ: ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿಗೆ ಸಿಲುಕಿ ಮೂವರು ಅಪರಿಚಿತರು ಮೃತಪಟ್ಟಿದ್ದಾರೆ.

ಜ.18ರಂದು ಪಾಂಡವಪುರ ರೈಲು ನಿಲ್ದಾಣ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. 5.5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದಾರೆ. ಈತನ ಮೈಮೇಲೆ ಕಪ್ಪುಬಣ್ಣದ ಜರ್ಕಿನ್, ಕೆಂಪು ಬಣ್ಣದ ಟೀ ಶರ್ಟ್, ಸಿಮೆಂಟ್ ಬಣ್ಣದ ಚಡ್ಡಿ ಇದೆ. ಮೃತದೇಹವನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿಡಲಾಗಿದೆ.

ಜ.19ರಂದು ಪಾಂಡವಪುರ-ನಾಗನಹಳ್ಳಿ ಮಾರ್ಗ ಮಧ್ಯೆ ರೈಲು ಡಿಕ್ಕಿ ಹೊಡೆದು ಸುಮಾರು 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. 5.6 ಅಡಿ ಎತ್ತರವಿದ್ದು, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಈತನ ಮೈಮೇಲೆ ಕಪ್ಪು ಮತ್ತು ಬಿಳಿ ಬಣ್ಣದ ದೊಡ್ಡ ಚೌಕಳಿವುಳ್ಳ ತುಂಬು ತೋಳಿನ ಅಂಗಿ, ಕಡುನೀಲಿ ಬಣ್ಣದ ಪ್ಯಾಂಟ್ ಇದೆ. ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.

ಜ.22ರಂದು ಶೆಟ್ಟಿಹಳ್ಳಿ-ಮದ್ದೂರು ಮಾರ್ಗ ಮಧ್ಯೆ ಸುಮಾರು 45 ರಿಂದ 50 ವರ್ಷದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. 5.3 ಅಡಿ ಎತ್ತರ, ಸಾಧಾರಣ ಶರೀರ, ಕಪ್ಪು ಮೈಬಣ್ಣ ಹೊಂದಿದ್ದಾರೆ. ಈತ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಮತ್ತು ಕೆಂಪು ಮಿಶ್ರಿತ ಗೆರೆಯುಳ್ಳ ತುಂಬು ತೋಳಿನ ಅಂಗಿ ಇದೆ. ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿಡಲಾಗಿದೆ. ಈ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಸುದಾರರಿದ್ದರೆ ಮಂಡ್ಯ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net