ಜಿಂದಾಲ್ ಕಾರ್ಖಾನೆಯಲ್ಲಿ ಅವಘಡ; ನೀರಿನ ಹೊಂಡಕ್ಕೆ ಬಿದ್ದು 3 ಸಾವು

Zindal
Published on

ಳ್ಳಾರಿ: ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಎಂದು ಗುರುತಿಸಲಾಗಿದೆ. ತೋರಣಗಲ್ಲು‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್​ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಪೈಪ್​ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್​ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್​​ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರೂ ಕೂಡ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಕೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net