ಗಂಡನ ಅಗಲಿಕೆ ನೋವು; ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡ ತಾಯಿ

Crime Scene
Published on

ತುಮಕೂರು: ಗಂಡನ ಅಗಲಿಕೆ ನೋವಿನಿಂದ ಹೊರಬಾರಲಾಗದೆ ಮನನೊಂದು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

ಮೃತರನ್ನು ವಿಜಯ ಲಕ್ಷ್ಮೀ(25), ಯಶವಂತ್ ನಾಯಕ(5), ಜಸ್ವಂತ್ ನಾಯಕ(1) ಎಮದು ಗುರುತಿಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tumkur Suicide

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದು ಈ ನೋವಿನಲ್ಲೇ ವಿಜಯಲಕ್ಷ್ಮೀ ತನ್ನ ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯಲಕ್ಷ್ಮೀ ಹಾಗೂ ಅವರ ಪುತ್ರ ಯಶವಂತ್​ ಮೃತದೇಹ ಪತ್ತೆಯಾಗಿದ್ದು, ಜಸ್ವಂತ್​ ಶವ ಈವರೆಗೂ ಪತ್ತೆಯಾಗಿಲ್ಲ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net