

ಮೈಸೂರು: 12ನೇ ಶೂಟಿಂಗ್ ಸ್ಪರ್ಧೆಯಲ್ಲಿ ಮೈಸೂರು ಶೂಟಿಂಗ್ ಕ್ಲಬ್‌ನ ಶೂಟರ್‌ಗಳು ಮೂರು ವೈಯಕ್ತಿಕ ಪದಕಗಳನ್ನು ಪಡೆದಿದ್ದಾರೆ.
ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್‌ನಿಂದ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ಆಯೋಜಿಸಿದ್ದ 12ನೇ ಶೂಟಿಂಗ್ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.
ಮೈಸೂರು ಕ್ಲಬ್‌ನ 6 ಶೂಟರ್‌ಗಳು ಪ್ರಥಮಬಾರಿಗೆ. 177 ಮತ್ತು .22 (50ಮೀ.ಫೈರ್ ಆಮ್ಸ್)ಪೀಪ್ ಸೈಟ್ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ.
ನಗರದ ಬನ್ನಿಮಂಟಪದಲ್ಲಿರುವ ಮೈಸೂರು ಶೂಟಿಂಗ್ ಕ್ಲಬ್‌ನಲ್ಲಿ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದ ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮಂಡ್ಯದ ಎಂ.ಎಸ್.ಪುಣ್ಯಾ ಸ್ಪರ್ಧೆಯಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳಿಸಿದ್ದಾರೆ.
ಪಿಯುಸಿ ವಿದ್ಯಾರ್ಥಿನಿಯಾದ ಪಿ.ವರ್ಷಿಣಿ ಕಂಚಿನ ಪದಕ ಗಳಿಸಿ ಕೀರ್ತಿ ತಂದಿದ್ದಾರೆ. ಅಲ್ಲದೆ ಶೂಟರ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹಾಸನದ ತನೈಚಂದ್ರ, ನಂದಿತಾ ರವಿಚಂದ್ರ, ಕಾವ್ಯಾ, ಬೆಂಗಳೂರಿನ ಚೇತನ ಓಬುಲಕ್ಷ್ಮಿ ಉತ್ತಮ ಪ್ರದರ್ಶನ ನೀಡಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ.
ಅಲ್ಲದೆ ಮೈಸೂರು ಶೂಟಿಂಗ್ ಕ್ಲಬ್ ಕೂಚ್ ಹಾಗೂ ರೈಫಲ್ ತರಬೇತುದಾರ ಬಿ.ಆರ್.ದರ್ಶನ್‌ಕುಮಾರ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ.