ಬೈಕ್ ಗೆ ಟಿಪ್ಪರ್ ಡಿಕ್ಕಿ ಮೂವರು ಗಾರೆ ಕೆಲಸಗಾರರ ಸಾವು

Published on

ರಾಮನಗರ: ತಾಲೂಕಿನಲ್ಲಿ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಾರೆ ಕೆಲಸರಾರರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ತಾಲೂಕಿನ ಮಾಯಗಾನಹಳ್ಳಿ ಬಳಿ ಬೆಂಗಳೂರು - ಮೈಸೂರು ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗುರುಮೂರ್ತಿ (39), ಶೇಕ್​ ಆಸೀಫ್ (45) ಮತ್ತು ವೆಂಕಟೇಶ್ (50) ಎಂದು ಗುರ್ತಿಸಲಾಗಿದೆ. ಗಾಯಾಳು ಹನುಮಂತನನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯ ಸರ್ವೀಸ್ ರಸ್ತೆಯಲ್ಲಿ ಬಿಡದಿ ಕಡೆಗೆ ಒಂದೇ ಬೈಕ್ ನಲ್ಲಿ ಈ ನಾಲ್ವರು ಪ್ರಯಾಣ ಬೆಳೆಸಿದ್ದರು. ಈ ವೇಳೆ ಮಾಯಗಾನಹಳ್ಳಿ ಬಳಿ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಬೈಕ್ ಲಾರಿಗೆ ಡಿಕ್ಕಿಯೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರ ಹೆಸರು ಪತ್ತೆಯಾಗಿದ್ದರೂ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಎಎಸ್​ಪಿ ಸುರೇಶ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವಗಳನ್ನು ರಾಮನಗರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net