

ಪಡುಬಿದ್ರಿ: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಕಾರು ಡಿಕ್ಕಿಯಾಗಿ ಪಾದಚಾರಿಗಳಾದ ಬಾಗಲಕೋಟೆ ಜಿಲ್ಲೆ ರೇಣುಕಾ, ವಿದ್ಯಾ ಮತ್ತು ಸೀತವ್ವ ಎಂಬುವರು ಗಾಯಗೊಂಡಿದ್ದಾರೆ. ಕೂಲಿ ಕಾರ್ಮಿಕರಾದ ಮೂವರು ಕೆಲಸ ಮುಗಿಸಿಕೊಂಡು ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ, ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಉಪಚರಿಸಿ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.