ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಮೂವರು ಸ್ಥಳದಲ್ಲೇ ಸಾವು, ಇನ್ನೊಬ್ಬನ ಪರಿಸ್ಥಿತಿ ಗಂಭೀರ...

Accident
Published on

ಗದಗ: ರೋಣದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇನ್ನೊಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದರೆ ಇನ್ನೊಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ. ಅಷ್ಟೇ ಅಲ್ಲ, ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು.

ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಅಲಿ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದು, ಅಪ್ಸಾನಾ ಮುಲ್ಲಾ (20) ಗಾಯಗೊಂಡವರು. ಅಪಘಾತ ಸಂಭವಿಸಿದ್ದನ್ನು ನೋಡಿ ಲಾರಿ ಚಾಲಕರೊಬ್ಬರು ತಕ್ಷಣ ಕಾರಿನಿಂದ ಮೂವರ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net