ಕಾರು-ಲಾರಿ ಭೀಕರ ಅಪಘಾತ: ಮೂವರ ಸಾವು, ಒಬ್ಬನ ಸ್ಥಿತಿ ಗಂಭೀರ..

Accident
Published on

ಮಂಡ್ಯ: ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಈ ಭೀಕರ ಅವಘಡ ಸಂಭವಿಸಿದೆ.

ಮಂಡ್ಯ ಜಿಲ್ಲೆ ನಾಗಮಂಗಲದ ಹೊಸೂರು ಗೇಟ್ ಬಳಿ ಕಾರು ಮತ್ತು ಲಾರಿ ಡಿಕ್ಕಿಯಾಗಿವೆ. ದೇವರಾಜು ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಪಂ ಗ್ರಾಮಲೆಕ್ಕಿಗ ದೇವರಾಜು, ಪಾಂಡವಪುರ ತಾಲೂಕಿನ‌ ಕೆನ್ನಾಳು ಗ್ರಾಪಂ ಗ್ರಾಮ ಸಹಾಯಕ ಮಂಜುನಾಥ್ ಹಾಗೂ ಇನ್ನೊಬ್ಬರು ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ದೇವರಾಜು ಜಮೀನು ಕೆಲಸದ ನಿಮಿತ್ತ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿದ್ದರು. ವಾಪಸ್ ಬರುವಾಗ ಮೈಸೂರಿನಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net