

ಹುಬ್ಬಳ್ಳಿ: ಓಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ತಾಲೂಕಿನ ಕಿರೇಸೂರ ಗ್ರಾಮದ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ. ಮೃತರನ್ನು ಜಾಫರಸಾಬ್ ಮಂಗಳೂರು (60), ಮುಸ್ತಫಾ (ಸಾಹೇಬ) ಮಂಗಳೂರು (36), ಶೊಹೇಬ್ ಮಂಗಳೂರು (06) ಮೃತ ದುರ್ದೈವಿಗಳು.
ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.