ಹರ್ಷ ಕೊಲೆ ಪ್ರಕರಣ; ಶಿವಮೊಗ್ಗದ ಮೂವರ ಬಂಧನ...

New Project(5)
Published on

ಬೆಂಗಳೂರು: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದವರೇ ಆದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಖುದ್ದು ಗೃಹ ಸಚಿವರೇ ಈ ಮಾಹಿತಿಯನ್ನು ತಿಳಿಸಿದ್ದಾರೆ.

ಇಂದು ರಾತ್ರಿ ಸುಮಾರಿಗೆ ಶಕ್ತಿಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಈ ವಿಷಯ ತಿಳಿಸಿದರು.

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮೂವರೂ ಶಿವಮೊಗ್ಗದವರು. ಇನ್ನಿಬ್ಬರ ಕುರಿತು ಸುಳಿವು ಸಿಕ್ಕಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net