ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ವಶಕ್ಕೆ

arrested
Published on

ಮಂಗಳೂರು : ಕಾವೂರು ಜಂಕ್ಷನ್ ಬಳಿ ಮಂಗಳವಾರ ರಾತ್ರಿ 12.30ರ ವೇಳೆಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಠಾಣೆ ಪೊಲೀರು ವಶಕ್ಕೆ ಪಡೆದಿದ್ದಾರೆ.

ರಂಗಿಪೇಟೆ ನಿವಾಸಿ ಮಹಮ್ಮದ್ ಾಜ್ (24), ಕೇರಳ ತ್ರಿಶ್ಶೂರಿನ ಅರಟ್ಟುಪರಂಬಿಲ್ ನಿವಾಸಿ ಶರ್ೀ ಎ.ಎಸ್. (25) ಮತ್ತು ಸುಳ್ಯ ತಾಲೂಕಿನ ಗಾಂಧೀನಗರ ನಿವಾಸಿ ಮಹಮ್ಮದ್ ಅಶ್ರ್ (24) ರಾತ್ರಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ.ಬೈಂದೂರು ಅವರು ಸಿಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಓಡಲು ಯತ್ನಿಸಿದ್ದು, ಪೊಲೀಸ್ ಸಿಬಂದಿ ಸುತ್ತುರಿದು ಹಿಡಿದು ವಿಚಾರಣೆ ನಡೆಸಿದ್ದಾರೆ. ಬಂಧಿತರ ಪೈಕಿ ಮಹಮ್ಮದ್ ಾಜ್ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದಿದ್ದು, ಮೂವರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಹಮ್ಮದ್ ಾಜ್ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net