

ಬಾಗಲಕೋಟೆ: ಪಂಚಮಸಾಲಿ ಮೀಸಲಾತಿ ಸಲುವಾಗಿ ಅಂತಿಮ ಹೋರಾಟದ ಕುರಿತಂತೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಇಂದು ಎರಡನೇ ಸಭೆ ನಡೆಸಲಾಗಿದ್ದು, ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಸೇರಿ ಹಲವು ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು.