ಸದ್ಭಾವನ ಪ್ರಶಸ್ತಿಗೆ ಮೂವರು ಆಯ್ಕೆ

web
Published on

ಮೈಸೂರು: ಅದಮ್ಯ ರಂಗಶಾಲೆಯ ವತಿಯಿಂದ ನೀಡಲಾಗುವ ‘ಮಹಾತ್ಮ ಗಾಂಧಿ ಸದ್ಭಾವನ ಪ್ರಶಸ್ತಿ’ಗೆ ನಗರದ ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್. ಶಶಿಧರ್ ಸೇರಿದಂತೆ ವಿವಿಧ ಕ್ಷೇತ್ರದ ಮೂರು ಸಾಧಕರು ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ಗ್ರಾಹಕರ ಕಲ್ಯಾಣ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಕ್ರೆಡಿಟ್ ಐ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಪಿ. ವರ್ಷ, ಕಾಯಕ ಸಮಾಜಗಳ ಒಕ್ಕೂಟದ ಮುಖಂಡ ಎನ್.ಸಿ.ಉಮೇಶ್ ಅವರನ್ನು ಸಮಾಜಕ್ಕೆ ನೀಡಿದ ಸೇವೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜ. 29 ರಂದು ಸಂಜೆ 6ಕ್ಕೆ ನಗರದ ಜಯಲಕ್ಷ್ಮೀಪುರಂನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆವರಣದ ಕುವೆಂಪು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ. ಚಿದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅದಮ್ಯ ರಂಗಶಾಲೆ ಕಾರ್ಯದರ್ಶಿ ಚಂದ್ರು ಮಂಡ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net