

ಬೇಲೂರು: ತಾಲೂಕಿನಲ್ಲಿ ಮೂವರಿಗೆ ಭಾನುವಾರ ಕರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಾಸವಿದ್ದ ನಿವಾಸ ಹಾಗೂ ಬೀದಿಯನ್ನು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಸೀಲ್‌ಡೌನ್ ಮಾಡಲಾಯಿತು.
ತಾಲೂಕಿನ ಅರೇಹಳ್ಳಿ ಗ್ರಾಮದ 26 ವರ್ಷದ ನಿವಾಸಿ, ಕೋಗೋಡು ಗ್ರಾಮದ 23 ವರ್ಷದ ಮಹಿಳೆ ಹಾಗೂ ಪಟ್ಟಣದ 28 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಎಲ್ಲರನ್ನೂ ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಈ ಮೂವರು ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.