ಮುಖ್ಯಾಧಿಕಾರಿ ಸೇರಿದಂತೆ ಮೂವರು ಅಮಾನತು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ

siddaramaiah
Published on

ಮೈಸೂರು: ಕೆ.ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಯುವಕ ಮೃತಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ವರದಿ ನೀಡಿದ್ದಾರೆ. ಪರಿಶೀಲನೆ ಮಾಡದೆ ಕಲುಷಿತ ನೀರು ಪೂರೈಕೆ ಮಾಡಿರುವುದು ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಈ ಸಂಬಂಧ ಬೋಗಾದಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.

ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು ಕಲುಷಿತ ನೀರನ್ನು ಜನರಿಗೆ ನೀಡಬಾರದು. ಶುದ್ಧ ಕುಡಿಯುವ ನೀರು ನೀಡಬೇಕು. ಈ ಸಂಬಂಧ ಪ್ರತಿ ದಿನ ಕುಡಿಯುವ ನೀರನ್ನು ಪರಿಶೀಲಿಸಬೇಕು ಎಂದು ಸೂಚನೆ ನೀಡಿರುವುದಾಗಿ ಮಾಹಿತಿ ನೀಡಿದರು.

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಪ್ರಕಾರ ಅವನನ್ನು ವಿದೇಶಕ್ಕೆ ಕಳುಹಿಸಿರುವವರೇ ಅವರು. ಈಗ ಪತ್ರ ಬರೆದರೆ ಏನು ಮಾಡಬೇಕು? ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net