ನಿಯಂತ್ರಣ ತಪ್ಪಿ ಖಾಸಗಿ Bus ಪಲ್ಟಿ; ಮೂವರು ಮಹಿಳೆಯರು ಸಾವು, 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

Bus Accident
Published on

ತುಮಕೂರು: ಖಾಸಗಿ ಬಸ್​ (Private Bus) ಪಲ್ಟಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತವು ಬೆಳಗಿನ ಜಾವ 4:45ರ ಸುಮಾರಿಗೆ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿದೆ. ಇದರ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಬಳಿಕ ಮಾತನಾಡಿದ ಎಸ್​ಪಿ, ಮೃತರನ್ನು ಶುಬಾಳಿ ಸಿಂಗ್, ಊರ್ವಿ, ಪ್ರಿಯಾಂಕ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 29 ಮಂದಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ 4:45ರ ಸುಮಾರಿಗೆ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿದೆ.

ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಕಳ್ಳಂಬೆಳ್ಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net