

ಮಂಗಳೂರು: ನಗರದ ಕದ್ರಿಯಲ್ಲಿರುವ ವಿಶ್ವಹಿಂದು ಪರಿಷತ್ ಕಾರ್ಯಾಲಯದಲ್ಲಿ ಗುರುವಾರ ಜರುಗಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ.
ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಮತ್ತು ಬಜರಂಗದಳ ಮುಖಂಡ ರಘು ಸಕಲೇಶಪುರ ನೇತೃತ್ವದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನೆರವೇರಿಸಲಾಗಿದೆ. ಬಳಿಕ ಆಗಮಿಸಿದ್ದ 150ಕ್ಕೂ ಹಚ್ಚು ಕಾರ್ಯಕರ್ತರಿಗೆ ತ್ರಿಶೂಲ ನೀಡಿ, ಶಸ್ತ್ರ ಹಿಡಿಯಲು ಪ್ರೇರಣೆ ನೀಡುವ ರೀತಿಯಲ್ಲಿ ಪ್ರತಿಜ್ಞೆ ಕೈಗೊಳ್ಳಲಾಗಿದೆ.
ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟೀಕೆಯೂ ವ್ಯಕ್ತವಾಗಿದೆ. ಅನೈತಿಕ ಪೊಲೀಸ್‌ಗಿರಿ ವಿಚಾರದ ಕುರಿತಂತೆ ಪರ-ವಿರೋಧ, ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಮರ್ಥಿಸುವ ರೀತಿಯಲ್ಲಿ ನೀಡಿರುವ ಹೇಳಿಕೆಯ ಬೆನ್ನಲ್ಲೇ ತ್ರಿಶೂಲ ದೀಕ್ಷೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.