ಗಂಟಲುದ್ರವ ಪರೀಕ್ಷೆ ಕಡ್ಡಾಯ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ, ಮಾಸ್ಕ್ ಧರಿಸದಿದ್ದರೆ ದಂಡ

dc meeting
Published on

ಬೆಂಗಳೂರು ಗ್ರಾಮಾಂತರ

ಜಿಲ್ಲೆಯ ಎಲ್ಲ ಸಾರ್ವಜನಿಕ ಆಸ್ಪತ್ರೆಗಳು ಸೇರಿ ಖಾಸಗಿ ಆಸ್ಪತ್ರೆ ಮತ್ತು ನಸಿರ್ಂಗ್ ಹೋಂಗಳಲ್ಲಿ ತೀವ್ರ ಉಸಿರಾಟದ ಸಮಸ್ಯೆ, ಜ್ವರ, ಇನ್‌ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐಇಲ್‌ಐ) ತೊಂದರೆಯಿಂದ ದಾಖಲಾಗುವವರನ್ನು ಕಡ್ಡಾಯವಾಗಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‌ಮೆಂಟ್ ಕಾಯ್ದೆ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿನ ಕೈಗಾರಿಕಾ ಪ್ರದೇಶ, ಜನಸಂದಣಿ ಹೆಚ್ಚಾಗಿರುವ ಪ್ರದೇಶ ಆಯ್ಕೆ ಮಾಡಿ ಪೂರ್ವ ಸಿದ್ಧತೆಯೊಂದಿಗೆ ವಿಶೇಷ ವಾಹನದ ಮೂಲಕ ತಾಲೂಕುವಾರು ಪ್ರತಿ ದಿನ ಕನಿಷ್ಠ 40 ವ್ಯಕ್ತಿಗಳ ಗಂಟಲು ದ್ರವ ಪರೀಕ್ಷೆ ಕಡ್ಡಾಯವಾಗಿ ನಡೆಸಬೇಕು. ಪ್ರತಿ ತಾಲೂಕಿಗೊಂದರಂತೆ ಆಂಬುಲೆನ್ಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸುರಕ್ಷತಾ ಪರಿಕರ ಒದಗಿಸಲಾಗುವುದು ಎಂದು ತಿಳಿಸಿದರು.

ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿದರೆ ದಂಡ ವಿಧಿಸಲಾಗುವುದು. ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವುದು ಪ್ರತಿ ನಾಗರೀಕನ ಜವಾಬ್ದಾರಿಯಾಗಿದ್ದು ಅಧಿಕಾರಿಗಳು ಈ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net