

ಸಿರಗುಪ್ಪ: ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯುವುದಿಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ ಎಂದು ಪ್ರಾಂಶುಪಾಲ ಸೋಮಶೇಖರ್ ರೆಡ್ಡಿ ಹೇಳಿದರು.
ತಾಲೂಕಿನ ಹಚ್ಚೊಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯಲ್ಲಿ 2003-04ನೇ ಸಾಲಿನ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಗುರಿ, ಛಲ, ಗುರುವಿನ ಆಶೀರ್ವಾದ ಇದ್ದರೆ ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು. ಶಾಲೆಗೆ ಗೋಡೆ ಗಡಿಯಾರ ಮತ್ತು ಇತರ ಸಾಮಾಗ್ರಿಗಳನ್ನು ನೀಡಲಾಯಿತು.