ಶೈಕ್ಷಣಿಕ ಸಾಧನೆಯಿಂದ ಸಮಾಜದ ಅಭಿವೃದ್ಧಿ

snd pratiba puraskara
ಸಿಂಧನೂರಿನಲ್ಲಿ ಭಾನುವಾರ ತಾಲೂಕು ಕುರುಬರ ಸಂಘ ಮತ್ತು ಕನಕ ನೌಕರರ ಸಂಘ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ಕೆ.ಕರಿಯಪ್ಪ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯಶಿಕ್ಷಕ ಚಿದಾನಂದಯ್ಯ ಗುರುವಿನ್, ಪ್ರಮುಖರಾದ ಕೆ.ಬಸವಂತಪ್ಪ, ಕೆ.ಭೀಮಣ್ಣ, ಬಸಪ್ಪ ಹ್ಯಾಟಿ ಇತರರಿದ್ದರು.
Published on

ಸಿಂಧನೂರು: ಶೈಕ್ಷಣಿಕವಾಗಿ ಸಾಧನೆ ಮಾಡಿದರೆ ಸಮಾಜದ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಹೀಗಾಗಿ ಪಾಲಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲೂಕು ಕುರುಬರ ಸಂಘ ಮತ್ತು ಕನಕ ನೌಕರರ ಸಂಘ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಸಮಾಜದ ಮಕ್ಕಳು ಸಾಧನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಸಾಧನೆ ಮಾಡುವ ಪ್ರತಿಭಾವಂತರು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಸಮಾಜದಿಂದ ಅಂಥ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸುವ ಮೂಲಕ ಉನ್ನತ ಸಾಧನೆ ಮಾಡಲು ಪ್ರೇರೇಪಿಸಿದಂತಾಗುತ್ತದೆ ಎಂದರು.

ಇನ್‌ಸೈಟ್ ಐಎಎಸ್ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ಗುರಿ ಇಟ್ಟುಕೊಳ್ಳಬೇಕು. ಅದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಬೇಕು. ನಿಮ್ಮ ಸಾಧನೆಗೆ ನೀವೇ ಗುರುವಾಗಬೇಕು. ನಿರಂತರ ಅಧ್ಯಯನ ಶೀಲರಾಗಬೇಕು. ಹೊಸ ತಂತ್ರಜ್ಞಾನ ಬಳಸಿಕೊಂಡು ಸಾಧನೆ ಮಾಡಬೇಕು ಎಂದರು.

ಬಿಜೆಪಿ ಮುಖಂಡ ಕೆ.ಕರಿಯಪ್ಪ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಮುಖ್ಯಶಿಕ್ಷಕ ಚಿದಾನಂದಯ್ಯ ಗುರುವಿನ್ ಮಾತನಾಡಿದರು. ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತುರ್ವಿಹಾಳ ಅಮೋಘ ಸಿದ್ಧೇಶ್ವರ ಮಠದ ಮಾದಯ್ಯ ಗುರುವಿನ್, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಕೆ.ಬಸವಂತಪ್ಪ, ತಾಲೂಕು ಅಧ್ಯಕ್ಷ ಕೆ.ಭೀಮಣ್ಣ, ಮಸ್ಕಿ ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ನಿರುಪಾದೆಪ್ಪ ವಕೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net