ಕ್ರೀಡೆಯಿಂದ ಉತ್ತಮ ಆರೋಗ್ಯ ಸಾಧ್ಯ

DVD Cricket
ದೇವದುರ್ಗದಲ್ಲಿ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಸಮಿತಿ ಸದಸ್ಯ ವೆಂಕಟರಾಯ ಬೆನಕನ್ ಚಾಲನೆ ನೀಡಿದರು. ಪಿಐ ಎಸ್.ಮಂಜುನಾಥ, ಟಿಎಚ್‌ಒ ಡಾ.ಬನದೇಶ್ವರ, ಪಿಎಸ್‌ಐ ನಾರಾಯಣ, ಬಾಬುಅಲಿ ಕರಿಗುಡ್ಡ, ನಾಗರಾಜ ಸುಟ್ಟಿ, ಮಹಾದೇವ ಪಾಟೀಲ್, ಉದ್ಯಮಿ ಗೀರೀಶ ಬಳೆ, ಶಿವರಾಜ ಕೊತ್ತದೊಡ್ಡಿ ಇತರರಿದ್ದರು.
Published on

ದೇವದುರ್ಗ: ಕ್ರೀಡೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಿದೆ. ಒತ್ತಡದಲ್ಲಿ ಕೆಲಸ ಮಾಡುವ ನೌಕರರಿಗೆ ಮನೋರಂಜನೆ ಸಿಗುವುದು ವಿರಳ. ಇಂಥ ಕ್ರೀಡಾಕೂಟದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪಿಐ ಎಸ್.ಮಂಜುನಾಥ ಹೇಳಿದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಆಯೋಜಿಸಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಭಾನುವಾರ ಮಾತನಾಡಿದರು.

ಪತ್ರಿಕಾ ದಿನಾಚರಣೆ ನಿಮಿತ್ತ ವರ್ಷವಿಡಿ ಕೆಲಸ ಮಾಡವಂಥ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪತ್ರಕರ್ತರಿಗೆ ದೈಹಿಕ ಸದೃಢತೆಗಾಗಿ ಕ್ರೀಡಾಕೂಟ ಆಯೋಜಿಸಿದ್ದ ಶ್ಲಾಘನೀಯ. ಪೊಲೀಸರು, ಆರೋಗ್ಯ ಇಲಾಖೆ ನೌಕರರು, ಪತ್ರಕರ್ತರು ರಜೆ ತೆಗೆದುಕೊಳ್ಳದೆ ಕೆಲಸ ಮಾಡುತ್ತಿದ್ದಾರೆ. ಇಂಥವರಿಗಾಗಿ ಕ್ರೀಡಾಕೂಡ ಹಮ್ಮಿಕೊಂಡಿದ್ದು ಉತ್ತಮ ಬೆಳವಣಿಗೆ ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿಯ್ಯಪುರ ಮಾತನಾಡಿ, ಪೊಲೀಸರು, ಪತ್ರಕರ್ತರು ಹಾಗೂ ಆರೋಗ್ಯ ಇಲಾಖೆ ನೌಕರರು ಕರೊನಾ ಸಂದರ್ಭದಲ್ಲಿ ವಾರಿಯರ್ಸ್‌ನಂತೆ ಕೆಲಸ ಮಾಡಿದ್ದಾರೆ. ರಾಷ್ಟ್ರ ಲಾಂಛನದಲ್ಲಿ ಕಾಣದೇ ಇರುವ ನಾಲ್ಕನೇ ಸಿಂಹದಂತೆ ಸಮಾಜದಲ್ಲಿ ಗುರುತಿಸಿಕೊಳ್ಳದೆ ಸಮಾಜಸೇವೆ ಮಾಡುತ್ತಿರುವವರು ಪತ್ರಕರ್ತರು. ಅಂಥವರನ್ನು ಸಮಾಜ ಗುರುತಿಸಿ ಗೌರವ ನೀಡಬೇಕಿದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಸಮಿತಿ ಸದಸ್ಯ ವೆಂಕಟರಾಯ ಬೆನಕನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ, ಪಿಎಸ್‌ಐ ನಾರಾಯಣ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಬಾಬುಅಲಿ ಕರಿಗುಡ್ಡ, ಕಾರ್ಯದರ್ಶಿ ನಾಗರಾಜ ಸುಟ್ಟಿ, ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷ ಮಹಾದೇವಪ್ಪಗೌಡ ಹಿರೇಬೂದೂರು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾದೇವ ಪಾಟೀಲ್, ಉದ್ಯಮಿ ಗೀರೀಶ ಬಳೆ, ಅಖಂಡ ದೇವದುರ್ಗ ಹೋರಾಟ ಸಮಿತಿ ಸಂಚಾಲಕ ಶಿವರಾಜ ಕೊತ್ತದೊಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net