

ಧಾರವಾಡ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು, ಜು. 27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಬುಧವಾರ ಅವಳಿ ನಗರದಲ್ಲಿ ಬೆಳಗ್ಗೆಯಿಂದಲೇ ಮಳೆ ಅಬ್ಬರಿಸಿದೆ. ಗುರುವಾರವೂ ಭಾರಿ ಮಳೆ ಸುರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.