ಉಳಿದ ಕ್ಷೇತ್ರಗಳಿಗೆ ಸೋಮವಾರ ಅಥವಾ ಮಂಗಳವಾರ ಟಿಕೆಟ್ ಘೋಷಣೆ

mysore
Published on

ಮೈಸೂರು: ರಾಜ್ಯದಲ್ಲಿನ ಉಳಿದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಸೋಮವಾರ ಅಥವಾ ಮಂಗಳವಾರ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರ ನಮಗೆ ಕಗ್ಗಂಟಾಗಿಲ್ಲ. ಒಂದೇ ಬಾರಿ ತೀರ್ಮಾನ ಮಾಡಬಾರದು ಎಂದು ಹಂತ ಹಂತವಾಗಿ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದರು.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಮಾತ್ರವಲ್ಲ ರಾಜ್ಯದ 28 ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದೇನೆ. ಜತೆಗೆ ಈ ಎರಡು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಸ್ಪೀಕರಿಸಿದ್ದೇನೆ. ಎಲ್ಲ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸುತ್ತೇನೆ. ಈ ಬಾರಿ ನಾವು 20 ಕ್ಷೇತ್ರಗಳಲ್ಲಿ ಗೆದ್ದೆ ಗೆಲ್ಲುತ್ತೇವೆ. ಆದರೆ, 28 ಕ್ಷೇತ್ರ ಗೆಲ್ಲುತ್ತೇವೆ ಎಂದು ಬಿಜೆಪಿಯವರ ರೀತಿ ಸುಳ್ಳು ಹೇಳುವುದಿಲ್ಲ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ನಮಗೆ ಅನುಕೂಲವಾಗಿದೆ. ಕಳೆದ ಬಾರಿ ನಾವು ಜೆಡಿಎಸ್ ಜತೆ ಹೋಗಿದ್ದು ನಮಗೆ ಅನುಕೂಲ ಆಗಲಿಲ್ಲ. ಈ ಬಾರಿ ಜೆಡಿಎಸ್‌ನಿಂದ ಬಿಜೆಪಿಗೆ ನಷ್ಟವಾಗಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net