ಟಿಕೆಟ್ ಬುಕಿಂಗ್ ವ್ಯವಸ್ಥೆ ಕಲ್ಪಿಸಿ

12SND-02
ಸಿಂಧನೂರಿನಲ್ಲಿ ಸಚಿವ ಸೋಮಣ್ಣಗೆ ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ ಪ್ರಭುರಾಜ ಮನವಿ ಸಲ್ಲಿಸಿದರು.
Published on

ಸಿಂಧನೂರು: ನಗರದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಬುಕಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ಎಂಎಲ್ಸಿ ಬಸನಗೌಡ ಬಾದರ್ಲಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಗೆ ಶನಿವಾರ ಮನವಿ ಸಲ್ಲಿಸಿದರು.

ರಾಯಚೂರು ಜಿಲ್ಲೆಯಲ್ಲಿ ಸಿಂಧನೂರು ತಾಲೂಕು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ತಾಲೂಕಿನಲ್ಲಿ ವಿವಿಧ ಕೈಗಾರಿಕೆ ಘಟಕಗಳು, ರೈಸ್ ಮಿಲ್‌ಗಳು, ಟ್ರ್ಯಾಕ್ಟರ್ ಶೋ ರೂಂಗಳು, ಆಟೋ ಮೊಬೈಲ್ಸ್ ಹೆಚ್ಚಿನ ಪ್ರಮಾಣದಲ್ಲಿದ್ದು, ಸಿಂಧನೂರು ಪ್ರಮುಖ ನಗರಗಳಿಗೆ ಹಾದುಹೋಗಲು ಕೇಂದ್ರ ಸ್ಥಾನವಾಗಿದೆ. ಹಾಗಾಗಿ ಸರಕುಗಳನ್ನು ಸಾಗಿಸಲು ಹಾಗೂ ಪ್ರಯಾಣಿಕರು ಉದ್ದೇಶಿತ ಸ್ಥಳಗಳಿಗೆ ಪ್ರಯಾಣಿಸಲು ಮುಂಗಡ ಬುಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕೋರಿದರು.

ನಗರಸಭೆ ಅಧ್ಯಕ್ಷೆಯಿಂದ ಮನವಿ: ಗಂಗಾವತಿ ನಗರದ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಬುಕ್ಕಿಂಗ್ ಕೌಂಟರ್ ಇದ್ದು, ಸಿಂಧನೂರು ರೈಲ್ವೆ ನಿಲ್ದಾಣದಲ್ಲಿಯೂ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಶೌಚಗೃಹದ ವ್ಯವಸ್ಥೆ ಸೇರಿ ಮೂಲ ಸೌಕರ್ಯ ಒದಗಿಸಬೇಕೆಂದು ನಗರಸಭೆ ಹಂಗಾಮಿ ಅಧ್ಯಕ್ಷೆ ಮಂಜುಳಾ ಪ್ರಭುರಾಜ, ಸಚಿವರಿಗೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net